Kannada NewsKarnataka NewsLatest

*ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಬೆಳಗಾವಿ ಮೂಲಲದ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಜಿರಡ್ಕದ ಬಳಿ ಈ ದುರಂತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಮೃತ ವಿದ್ಯಾರ್ಥಿ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

ಏಳು ಜನ ಸ್ನೇಹಿತರು ನಿನ್ನೆ ಸಂಜೆ ನೇತ್ರಾವತಿ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.

Home add -Advt

Related Articles

Back to top button