Wanted Tailor2
Cancer Hospital 2
Bottom Add. 3

*ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ; ಹಾಸನ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ರಾಜೀವ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದಿದೆ.

ಮಾನ್ಯ (19) ಮೃತ ದುರ್ದೈವಿ. ಚನ್ನರಾಯಪಟ್ಟಣ ತಾಲೂಕಿನ ಹೊನ್ನಶಟ್ಟಿಹಳ್ಳಿ ಗ್ರಾಮದ ಮಾನ್ಯ ಪ್ರಥಮ ವರ್ಷದ ಎಲೆಕ್ಟ್ರ‍ಾನಿಕ್ & ಕಮ್ಯೂನಿಕೇಷನ್ ಓದುತ್ತಿದ್ದರು. ಇಂದು ಮೊದಲ ವರ್ಷದ ಆಂತರಿಕ ಪರೀಕ್ಷೆಗೆ ಹಾಜರಾಗಿದ್ದ ಮಾನ್ಯ ನಕಲು ಮಾಡಿದ ಆರೋಪ ಕೇಳಿಬಂದಿತ್ತು.

ಅಪಾಲಜಿ ಪತ್ರ ಬರೆದುಕೊಡುವಂತೆ ಉಪನ್ಯಾಸಕರು ಸೂಚಿಸಿದ್ದಾರೆ. ಅಲ್ಲದೇ ಕಾಲೇಜಿನ ಪ್ರಾಂಶುಪಾಲರ ಕೊಠಡಿಗೆ ಬಂದು ಹೋದ ವಿದ್ಯಾರ್ಥಿನಿ ಕಾಲೇಜಿನ 5ನೇ ಮಹಡಿಗೆತೆರಳಿ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಡಾವಣೆ ಠಾಣೆಯಲಿ ಪ್ರಕರಣ ದಾಖಲಾಗಿದೆ. ಇಂಜಿನಿಯರಿಂಗ್ ಓದಿ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.


Bottom Add3
Bottom Ad 2

You cannot copy content of this page