Latest

ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಸಿದ್ಧಾರ್ಥ್ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ.

ಮೈಸೂರು ಮೂಲದ 21 ವರ್ಷದ ಕವಿತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದ ಕವಿತಾ, ಏಕಾಏಕಿ ಆತ್ಮಹಯೆಗೆ ಶರಣಾಗಿರುವುದು ಪೋಷಕರಿಗೆ ಆಘಾತವನ್ನುಂಟುಮಾಡಿದೆ.

Home add -Advt

ತುಮಕೂರಿನ ಸಿದ್ದಾರ್ಥ್ ಎಂಜಿನಿಯರಿಂಗ್ ಕಾಲೇಜು ಹಾಸ್ಟೇಲ್ ನ ಸಂಗಮಿತ್ರ ಬ್ಲಾಕ್ ನಲ್ಲಿ ತನ್ನ ರೂಮಿನಲ್ಲಿ ಕವಿತಾ ನೇಣಿಗೆ ಶರಣಾಗಿದ್ದಾಳೆ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪ್ರಭಾಕರ ಕೋರೆಯನ್ನು ಬಿಜೆಪಿ ನಿರ್ಲಕ್ಷಿಸಿದೆಯೇ? ಸಿಎಂ ಬೊಮ್ಮಾಯಿ ಹೇಳಿದ್ದೇನು?

Related Articles

Back to top button