
ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡನ ಉತ್ತರಕಾಶಿ ಜಿಲ್ಲೆಯ ಹರ್ಸಿಲ್ ಸಮೀಪದ ಧರಾಲಿ ಪ್ರದೇಶದಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿ, ಒಂದು ಗ್ರಾಮ ಕೊಚ್ಚಿ ಹೋಗಿದೆ ಎನ್ನಲಾಗಿದ್ದು, ಮೇಘಸ್ಫೋಟದ ಭಯಾನಕ ವೀಡಿಯೋ ಇದೀಗ ವೈರಲ್ ಆಗಿದೆ.
ಗಂಗೋತ್ರಿ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಜಲಪ್ರವಾಹ ಹಾಗೂ ಗುಡ್ಡ ಕುಸಿತದ ಪರಿಣಾಮವಾಗಿ ಅನೇಕ ಮನೆಗಳು ಧ್ವಂಸವಾಗಿವೆ. ಈ ಘಟನೆಯಲ್ಲಿ 60 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ
ಸಾವು ನೋವಿನ ಅಧಿಕೃತ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಪ್ರಸ್ತುತ ರಕ್ಷಣಾ ಪಡೆಗಳು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಮೂಲ ಮಾಹಿತಿಗಳಿಂದ ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದ ಭಯಾನಕ ಪ್ರವಾಹದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದುರಂತದ ತೀವ್ರತೆಯಿಂದ ಗ್ರಾಮವೊಂದರ ಸಂಪೂರ್ಣವಾಗಿ ಕೊಚ್ಚಿಹೋದಂತಾಗಿದೆ.