ಪ್ರಗತಿ ವಾಹಿನಿ ಸುದ್ದಿ, ಶಿರಸಿ: ಶಿರಸಿ ಪ್ರತ್ಯೇಕ ಜಿಲ್ಲೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಮಾತಾಡಿರುವುದು ಶಿರಸಿಗರಲ್ಲಿ ಪ್ರತ್ಯೇಕ ಜಿಲ್ಲೆಯ ಬೇಡಿಕೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.
ಭಾನುವಾರ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನಿಮಿತ್ತ ಶಿರಸಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಸಿ ಪ್ರತ್ಯೇಕ ಜಿಲ್ಲೆಯ ಬೇಡಿಕೆ ಗಮನದಲ್ಲಿದೆ.
ಇನ್ನೂ ಕೆಲವೆಡೆ ಪ್ರತ್ಯೇಕ ಜಿಲ್ಲೆಯ ಬೇಡಿಕೆ ಇದೆ. ಎಲ್ಲವನ್ನೂ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶಿರಸಿಗೆ ಪರಿಸರ ವಿವಿ
ಶಿರಸಿಯಲ್ಲಿ ಈಗಾಗಲೇ ಅರಣ್ಯ ಮತ್ತು ತೋಟಗಾರಿಕೆ ವಿವಿ ಇದೆ. ಅತ್ಯುತ್ತಮ ಪರಿಸರ ಇಲ್ಲಿದೆ. ಈ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಬಜೆಟ್‍ನಲ್ಲಿ ಇದಕ್ಕಾಗಿ ಅನುದಾನ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಅರಣ್ಯವಾಸಿಗಳನ್ನು ಸರಕಾರ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ. ಸುಪ್ರಿಂ ಕೋರ್ಟ್ ನಿರ್ಣಯ ಬರುವವರೆಗೆ ಅರಣ್ಯವಾಸಿಗಳಿಗೆ ತೊಂದರೆ ಕೊಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಉತ್ತರ ಕನ್ನಡದಲ್ಲಿ ಪರಿಸರ ಸಂರಕ್ಷಣೆ ಜತೆಗೆ ಅಭಿವೃದ್ಧಿ ಕೈಗೊಳ್ಳುವ ಸವಾಲಿದೆ. ಕಳಚೆ ಗ್ರಾಮದಲ್ಲಿ ಭೂ ಕುಸಿತ ತಡೆಗೆ ಕ್ರಮ ವಹಿಸಲಾಗುವುದು. ಅರಣ್ಯ ಮರು ನಿರ್ಮಾಣ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಶಿವರಾಮ ಹೆಬ್ಬಾರ, ಸಿಸಿ ಪಾಟೀಲ, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಇದ್ದರು.
*ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪನೆಗೆ ನಿರ್ಧಾರ*
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ