Latest

ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ; 18ಜನರ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಪ್ರಭಾ ಠಾಣೆಯಲ್ಲಿ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನ.11ರಂದು ಈರಣ್ಣ ಕಡಾಡಿ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಂಬಲಿಗರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಕೆಯಲ್ಲಿ ವಿವಿಧ ದಲಿತ ಪರ ಸಂಘಟನೆಯ ಮುಖಂಡರ ವಿರುದ್ಧ ದೂರು ದಾಖಲಾಗಿತ್ತು.

ಕಾರು ಮುತ್ತಿಗೆ ಹಾಕಿ ಆಕ್ರೋಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟಪ್ರಭಾ ಠಾಣೆಯಲ್ಲಿ 18 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಇನ್ನು ಪ್ರಕರಣ ಸಂಬಂಧ ಮಾತನಾಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕಾಂಗ್ರೆಸ್ ಮುಗ್ದ ಜನರನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಮಠದಲ್ಲಿ ಓದುತ್ತಿದ್ದ ಮೂವರು ಬಾಲಕರು ದಿಢೀರ್ ನಾಪತ್ತೆ

https://pragati.taskdun.com/latest/degula-matha3-boys-missingramanagara/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button