*ಬೆಳಗಾವಿ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲಿನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿ ಮನವಿ ಮಾಡಿದ ನಂತರ ರೈಲ್ವೆ ಸಚಿವರು ಪುಣೆ- ಬೆಳಗಾವಿ ನಡುವೆ ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯದ ನಂತರ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ ಲಿಖಿತವಾಗಿ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿ, ಪ್ರಸ್ತಾವನೆಗಳನ್ನು ಪರಿಸಿಲಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬೆಳಗಾವಿ ಕೋರ್ ಡೆವಲಪ್‌ಮೆಂಟ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ, ಸಂದೀಪ ಪಾಟೀಲ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ