
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕನ್ನಡದ ಕಟ್ಟಾಳು ಡಾ.ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಬೆಳಗಾವಿಯಲ್ಲಿ ಸ್ಮಾರಕವೊಂದನ್ನು ಸ್ಥಾಪಿಸಬೇಕೆಂದು ಕನ್ನಡ ಪರ ಸಂಘಟನೆಗಳ ಸಭೆಯು ರಾಜ್ಯ ಸರಕಾರವನ್ನು ಆಗ್ರಹಿಸಿತು.

ಪುಟ್ಟಪ್ಪನವರು ಜೀವಂತವಾಗಿದ್ದಾಗ ಅವರ ಬಗ್ಗೆ ಎಳ್ಳಷ್ಟೂ ಗೌರವ ತೋರಿಸದ ಹಾಗೂ ಅವರು ಅಗಲಿದಾಗ ಶೋಕಾಚರಣೆ ಘೋಷಿಸದ ಸರಕಾರದ ವಿರುದ್ಧ ಕನ್ನಡ ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಮಹಾಪೌರ ಸಿದ್ದನಗೌಡ ಪಾಟೀಲ, ಅಶೋಕ ಚಂದರಗಿ, ಮಹಾದೇವ ತಳವಾರ, ಆರ್.ಎಸ್.ದರ್ಗೆ ಮಾತನಾಡಿ ಪುಟ್ಟಪ್ಪ ಅವರು ಬೆಳಗಾವಿಗಾಗಿ ಮಾಡಿದ ಸೇವೆಯನ್ನು ಸ್ಮರಿಸಿಕೊಂಡರು.
ಮೂವರು ಸ್ವಾಮೀಜಿಯವರು ಮಾತನಾಡಿ,ರಾಜ್ಯ ಸರಕಾರ ಪುಟ್ಟಪ್ಪ ಅವರ ಸ್ಮಾರಕವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವೊಂದನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಶಂಕರ ಬಾಗೇವಾಡಿ ಸ್ವಾಗತಿಸಿದರು. ಒಂದು ನಿಮಿಷ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ