Kannada NewsKarnataka NewsLatest

*ಪ್ರಸಾದ ಸೇವಿಸಿದ್ದ 400ಕ್ಕೂ ಹೆಚ್ಚು ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಶ್ರೀರಾಮನವಮಿ ಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

Home add -Advt

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಹಿನ್ನೆಲೆಯಲ್ಲಿ ವಿತರಿಸಿದ್ದ ಪ್ರಸಾದ ಸೇವಿಸಿ 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.

ಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಹುತೇಕರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟು ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

Related Articles

Back to top button