ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ
ಈ ಬಗ್ಗೆ ಬಿಜೆಪಿ ಆದೇಶ ಹೊರಡಿಸಿದ್ದು, ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಆದೇಶ ತಕ್ಷಣ ಜಾರಿಗೆ ಬರಲಿದೆ ಎಂದು ಹೇಳಿದೆ.
ಪುತ್ರನಿಗೆ ಹಾವೇರಿ ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡಿದ್ದ ಈಶ್ವರಪ್ಪ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ಸಮರ ಸಾರಿದ್ದರು. ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಕೊನೆ ಕ್ಷಣದಲ್ಲಿ ಆದರು ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರಿದ್ದರು. ಆದರೆ ಅದೂ ಹುಸಿಯಾಗಿದ್ದು, ಈ ಬೆನ್ನಲ್ಲೆ ಬಿಜೆಪಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ