Belagavi NewsBelgaum NewsKannada NewsKarnataka NewsNationalPolitics
*ಉತ್ತರ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಕಿತ್ತೂರು ಕರ್ನಾಟಕ ನಿಗಮ ಸ್ಥಾಪಿಸಿ: ಲಕ್ಷ್ಮಣ ಸವದಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಆಗಬೇಕು ಎಂದು ಶಾಸಕ ಲಕ್ಷ್ಮಿಣ ಸವದಿ ಆಗ್ರಹಿಸಿದರು.
76 ನೇಗಣರಾಜ್ಯೋತ್ಸವ ಆಚರಣೆ ವೇಳೆ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಆಗ್ರಹಿಸಿರುವ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಕಿತ್ತೂರು ಕರ್ನಾಟಕ ನಿಗಮ ಸ್ಥಾಪನೆಗೆ ಆಗ್ರಹಿಸಬೇಕು. ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಿ 5 ಸಾವಿರ ಕೋಟಿ ಹಣ ಮೀಸಲಿಡಬೇಕು. ಪ್ರತಿ ಜಿಲ್ಲೆಗೆ ವಿಶೇಷ ಅನುದಾನ ನೀಡಬೇಕು. ಈಗಾಗಲೇ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಬಜೆಟ್ ಮಂಡನೆ ಸಮಯದಲ್ಲಿ ಮತ್ತೋಮ್ಮೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ ಎಂದಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ