Belagavi NewsBelgaum NewsKannada NewsKarnataka NewsNational

*ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಸ್ಥಾಪಿಸಿ:ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ, ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಆರ್. ಅಭಿಲಾಶ್ ಅವರು ಹಾಗೂ ಕರವೇ ಮುಖಂಡರು, ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ ಬೆಳಗಾವಿಯು ಶಿಕ್ಷಣ, ಕೈಗಾರಿಕೆ ಹಾಗೂ ಭೌಗೋಳಿಕವಾಗಿ ಅತ್ಯಂತ ಸೂಕ್ತ ಪ್ರದೇಶವಾಗಿದ್ದು, ಐಟಿ-ಬಿಟಿ ಕಂಪನಿಗಳ ಸ್ಥಾಪನೆಯಿಂದ ಸಾವಿರಾರು ಸ್ಥಳೀಯ ಯುವಕರಿಗೆ ಉದ್ಯೋಗ ದೊರೆಯುವುದರ ಜೊತೆಗೆ ನಗರದ ಆರ್ಥಿಕ ಬೆಳವಣಿಗೆಗೆ ಹೊಸ ಉತ್ತೇಜನ ಸಿಗಲಿದೆ ಎಂದು ತಿಳಿಸಲಾಯಿತು. ಅಲ್ಲದೆ, ಐಟಿ ಪಾರ್ಕ್, ಅಗತ್ಯ ಮೂಲಸೌಕರ್ಯ ಹಾಗೂ ಹೂಡಿಕೆದಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಬೆಳಗಾವಿಯನ್ನು ಉತ್ತರ ಕರ್ನಾಟಕದ ಪ್ರಮುಖ ತಂತ್ರಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಬೇಕೆಂದು ಮನವಿ ಮಾಡಲಾಯಿತು.

Home add -Advt

ಮನವಿಯನ್ನು ಸ್ವೀಕರಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ವಿಷಯವನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಲ್ಗಲಿ, ಸೂರಜ್, ರಾಜು ಕಲ್ಪತ್ರಿ, ಗಿರಿಜಾ, ಝೋಯೆಲ್, ಉಮಾ ವಾಜಂತ್ರಿ, ನಾಗನಗೌಡ ಪಾಟೀಲ, ಆದರ್ಶ್ ಸಾಲಿಮಠ್ ಸೇರಿದಂತೆ ಅನೇಕ ಕರವೇ ಮುಖಂಡರು ಉಪಸ್ಥಿತರಿದ್ದರು.

Related Articles

Back to top button