Belagavi NewsBelgaum NewsKannada NewsKarnataka NewsNationalPolitics

*ಅಪರಾಧ ತಡೆಗೆ ಹೆಚ್ಚುವರಿ ಪೊಲೀಸ್ ಠಾಣೆಗಳ ಸ್ಥಾಪನೆ: ಶಾಸಕ ರಾಜು ಕಾಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಗಡಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಶಾಸಕ ರಾಜು ಕಾಗೆ ಪ್ರತಿಕ್ರಿಯೆ ನೀಡಿದ್ದು ಶೀಘ್ರವೆ ಗ್ರಾಮೀಣ ಭಾಗದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗೆ ಪ್ರಯತ್ನಿಸುವುದಾಗಿ ಹೇಳಿದರು.

ಕಾಗವಾಡ ತಾಲೂಕಿನ ಮದಭಾವಿ ಗ್ರಾಮದ ಮುರಾರ್ಜಿ ಶಾಲಾ ಆವರಣ ಹಾಗೂ ಕಂಪೌಂಡ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೆ ಪೊಲೀಸ್‌ ಸಿಬ್ಬಂದಿ ಕೊರತೆ ಇದ್ದರೂ ಕ್ರೈಮ್ ವಿಚಾರದಲ್ಲಿ ನಮ್ಮ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು ಅಪರಾಧ ತಡೆಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ.

ಗಡಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹ ಮಂತ್ರಿಗಳ ಜೊತೆ ಚರ್ಚಿಸಿ ಗಡಿ ಭಾಗದಲ್ಲಿ ಹೆಚ್ಚುವರಿ ಗ್ರಾಮೀಣ ಪೊಲೀಸ್ ಠಾಣೆ ವ್ಯವಸ್ಥೆ ಮಾಡಲಾಗುವುದು ಎಂದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button