Belagavi NewsKarnataka NewsLatest

*BREAKING: ಪ್ರತಾಪ್ ರಾವ್ ಪಾಟೀಲ್ ಪುತ್ರನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆ, ವೃದ್ಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪ್ ರಾವ್ ಪಾಟೀಲ್ ಪುತ್ರ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಪಾಟೀಲ್ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

ಅಕ್ಟೋಬರ್ 6 ರಂದು ಇಟ್ನಾಳದಲ್ಲಿ ಗುಂಪುಕಟ್ಟಿಕೊಂಡು ಮಹಿಳೆ ಹಾಗೂ ವೃದ್ಧರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿರುವ ಹಾಗೂ ಕಲ್ಲು ತೂರಾಟ ನಡೆಸಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಗಾಯಾಳುಗಳನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಫ್ ಐ ಆರ್ ದಾಖಲಾದರೂ ಈವರೆಗೆ ಕೇವಲ ಇಬ್ಬರು ಆರೋಪಿಗಳನ್ನು ಮಾತ್ರ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗಾಯಾಳುಗಳು ಅಳಲು ತೋಡಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button