*ರಾಜ್ಯಕ್ಕೆ ಬಂಪರ್ ಯೋಜನೆ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ಉಕ್ಕು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸುವ ಮೂಲಕ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಎಚ್.ಡಿ.ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ ಯೋಜನೆಗೆ ಅನುಗುಣವಾಗಿ ಸ್ಥಳೀಯ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವುದು, ಹಾಗೂ ಉದ್ಯೋಗ ಸೃಷ್ಟಿಸುವುದು ಸಚಿವಾಲಯ ಆದ್ಯತೆಯ ಕೆಲಸವಾಗಲಿದೆ ಎಂದು ಎಚ್‌ಡಿಕೆ ಹೇಳಿದರು. ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಉನ್ನತ ಮಟ್ಟದ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಕುಮಾರಸ್ವಾಮಿ, 2030-31 ರ ವೇಳಗೆ ಕಚ್ಚಾ ಉಕ್ಕಿನ ಸಾಮರ್ಥ್ಯವನ್ನು 300 ದಶಲಕ್ಷ ಟನ್ ಗೆ ಹೆಚ್ಚಿಸಲು ಉಕ್ಕು ಸಚಿವಾಲಯ ಕೆಲಸ ಮಾಡಬೇಕು ಎಂದಿದ್ದಾರೆ.
ರಾಜ್ಯದ ಕುದುರೆ ಮುಖದಲ್ಲಿ ಸಿಗುವ ಅದಿರು ವಿಶ್ವದಲ್ಲೇ ಶ್ರೇಷ್ಠ ಗುಣಮಟ್ಟದ ಅದಿರು ಎಂದು ಹೆಸರು ಪಡೆದಿದೆ. ಇದನ್ನು ಗಮನದಲ್ಲಿರಿಸಿಕೊಂಡು ಚೀನಾದೊಂದಿಗೆ ಸ್ಪರ್ಧಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ