*ಚಾರಿತ್ರಿಕ ಉದ್ಯೋಗ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
*580 ಉದ್ಯಮಿಗಳು/ ಕಂಪನಿಗಳು ಹಾಗೂ ಒಂದು ಲಕ್ಷದಷ್ಟು ವಿದ್ಯಾರ್ಥಿಗಳು ಮೇಳದಲ್ಲಿ ಭಾಗಿ*
*ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ ಪ್ರಧಾನಿ ಮೋದಿ ವಿದ್ಯಾರ್ಥಿ, ಯುವಕರ ಮತ ಗಳಿಸಿದರು. ಈ ಲೆಕ್ಕದಲ್ಲಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ ಮೋದಿಯವರು ಇರುವ ಉದ್ಯೋಗವವನ್ನೂ ಕಸಿದುಕೊಂಡ ಕಾರಣ ನಿರುದ್ಯೋಗ ಪ್ರಮಾಣ ದೇಶದಲ್ಲಿ ಶೇ8.40 ಕ್ಕೆ ಏರಿಕೆಯಾಗಿದೆ: ಸಿ.ಎಂ.ಸಿದ್ದರಾಮಯ್ಯ ವಿವರಣೆ*
*ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -: ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಅರಮನೆ ಮೈದಾನದಲ್ಲಿ ನಡೆದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರಗಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40 ಶೇ ಏರಿಕೆಯಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.
ನಾವು ಯುವ ನಿಧಿಯನ್ನೂ ಕೊಡ್ತೀವಿ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ ಎಂದು ಭರವಸೆ ನೀಡಿದರು.
ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದರು.
ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ