Kannada NewsKarnataka NewsLatest

*ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ದಿಗಳು ಪತ್ತೆ ಪ್ರಕರಣ: ತನಿಖೆಗೆ ಎಂಟ್ರಿಕೊಟ್ಟ NIA*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಎಂಟ್ರಿಕೊಟ್ಟಿದೆ.

Home add -Advt

ಜಿಲೆಟಿನ್ ಕಡ್ಡಿಗಳು ಪತ್ತೆ ಬಗ್ಗೆ ಕಗ್ಗಲಿಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಈ ನಡುವೆ ಎನ್ ಐಎ ಅಧಿಕಾರಿಗಳು, ಕೇಂದ್ರ ಗುಪ್ತಚರ ಸಂಸ್ಥೆ ರಾಅ ಅಧಿಕಾರಿಗಳು ಭೇಟಿ ನೀಡಿದ್ದು, ಜಿಲೆಟಿನ್ ಕಡ್ದಿಗಳು ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ದಕ್ಷಿಣ ಎಸ್ ಪಿ ಹಾಗೂ ರಾಮನಗರದ ಐಜಿಪಿಯಿಂದ ಮಾಹಿತಿ ಕಲೆಹಾಕಿದ್ದಾರೆ. ಒಂದೆಡೆ ಪೊಲೀಸರ ನಾಲ್ಕು ವಿಶೇಶ ತಂಡಗಳಿಂದಲೂ ತನಿಖೆ ಮುಂದುವರೆದಿದೆ. ಈ ನಡಿವೆ ಎನ್ ಐಎ ಅಧಿಕಾರಿಗಳು ಕೂಡ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾದ ಧ್ಯಾನ ಮಂದಿರ ಉದ್ಘಾಟನೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವ ಹಿನ್ನೆಲೆ ನಿನ್ನೆ ಪ್ರಧಾನಿ ಮೋದಿ ಆಗಮಿಸಿದ್ದರು. ಪ್ರಧಾನಿ ಮೋದಿ ತೆರಳುವ ರಸ್ತೆ ಬಳಿ ಸ್ಫೋಟಕ ವಸ್ತುಗಳಾದ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರೋದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿದೆ.


Related Articles

Back to top button