ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಕ್ರಮ: ಸಿಎಂ

 ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ– ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಅಗತ್ಯವಿರುವ ಪರಿಣಿತ ವ್ಯವಸ್ಥೆಗಳ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ತಮ್ಮ ಹುಬ್ಬಳ್ಳಿ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯಗಳಿವೆ. ಜಿನೋಮ್ ಸೀಕ್ವೆನ್ಸಿಂಗ್ ಗೆ ಪರಿಣಿತ ವ್ಯವಸ್ಥೆ ಅಗತ್ಯ. ಒಮಿಕ್ರಾನ್ ಬಂದಿದ್ದರಿಂದ ಸಂಶಯವಿದ್ದಲ್ಲಿ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಗಾಗಿ ಎನ್.ಸಿ.ಬಿ.ಎಸ್ ಗೆ ಕಳುಹಿಸಲಾಗುತ್ತಿದೆ. ಅತಿ ಶೀಘ್ರ ದಲ್ಲಿ ಪರೀಕ್ಷೆಯ ವರದಿ ಬರಲಿದೆ ಬರುವ ವ್ಯವಸ್ಥೆ ಆಗಲಿದೆ ಎಂದರು.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವದಿನಗಳನ್ನು ಕಡಿತ ಮಾಡಿರುವ ಬಗ್ಗೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಈಗಾಗಲೇ ಕೆ.ಎಸ್.ಈಶ್ವರಪ್ಪ ಅವರು ಈ ಬಗ್ಗೆ ಉತ್ತರ ನೀಡಿದ್ದಾರೆ ಎಂದರು.

Home add -Advt

ಬೊಮ್ಮಾಯಿ ಅವರು ಸುಳ್ಳು ಹೇಳುತ್ತಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಬಗ್ಗೆ ನನಗೆ ಅಪಾರ ಗೌರವವಿತ್ತು. ಅವರ ಇತ್ತೀಚಿನ ಹೇಳಿಕೆಗಳು ನನಗೆ ನಿರಾಶೆ ಉಂಟು ಮಾಡಿದೆ ಎಂದರು.

ಮೂವರೊಂದಿಗೆ ಸಿಎಂ ಸೀಕ್ರೆಟ್ ಮೀಟಿಂಗ್: ಬೆಳಗಾವಿ ರಾಜಕೀಯದಲ್ಲಿ ಕುತೂಹಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button