Kannada NewsKarnataka NewsLatest
*ಬೆಳಗಾವಿಯಿಂದ ಎಥನಾಲ್ ಸಾಗಿಸುತ್ತಿದ್ದ ವಾಹನ ಪಲ್ಟಿ: ಅಪಘಾತದ ರಭಸಕ್ಕೆ ಬೆಂಕಿಯಲ್ಲಿ ಹೊತ್ತಿ ಉರಿದ ಟ್ಯಾಂಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಚಿಕ್ಕೋಡಿಯಿಂದ ಕೇರಳಕ್ಕೆ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ, ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಎಥನಾಲ್ ಟ್ಯಾಂಕರ್ ಬೆಂಕಿಗಾಹುತಿಯಾಗಿದ್ದು, ಸುಟ್ಟು ಕರಕಲಾಗಿದೆ. ಎಥನಾಲ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ಅರಬೈಲ್ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ.
ಟ್ಯಾಂಕರ್ ಪಲ್ಟಿಯಾದ ಪರಿಣಾಮ ಎಥನಾಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಚಾಲಕ ಹಾಗೂ ಕ್ಲೀನರ್ ವಾಹನದಿಂದ ಇಳಿದು ದೂರ ಓಡಿದ್ದಾರೆ. ನೋಡನೋಡುತ್ತಿದ್ದಂತೆ ಟ್ಯಾಂಕರ್ ಧಗ ಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


