Belagavi NewsBelgaum NewsKannada NewsKarnataka NewsNationalPolitics

*ವಿಶ್ವ ಹಿರಿಯ ನಾಗರಿಕರ ದಿನಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಅಸೋಸಿಯೇಶನ್ ಜಿಲ್ಲಾ ಘಟಕ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರದಲ್ಲಿ ನಗರದ ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಗುರು ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಮಂಗಳವಾರ (ಅ.01) ವಿಶ್ವ ಹಿರಿಯ ನಾಗರಿಕ ದಿನಾಚರಣೆಯನ್ನು ಆಚರಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಮುರಳಿಮೋಹನ ರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಾದ ಶ್ರೀಕಾಂತ ಹಿರೇಮಠ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ನಾಮದೇವ ಬೀಲ್ಕರ್, ಹಗಲು ಯೋಗಕ್ಷೇಮದ ಹಿರಿಯ ನಾಗರಿಕ ಫಲಾನುಭವಿಗಳು ಹಾಗೂ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button