*ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ದುರಂತ: ಇಬ್ಬರು ಬಾಲಕರು ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪತೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದಲ್ಲಿ ನಡೆದಿದೆ. ಎರಡನೇ ತರಗತಿ ಹಾಗೂ ನಾಲ್ಕನೇ ತರಗತಿ ಓದುತ್ತಿದ್ದ ಬಾಲಕರು ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಲಕರಿಬ್ಬರೂ ನಿನ್ನೆ ಸಂಜೆಯಿಂದ ಕಾಣೆಯಿದ್ದರು. ಇಂದು ಬೆಳಿಗ್ಗೆ ಇಬ್ಬರು ಬಾಲಕರ ಶವ ಎತ್ತಿನಹೊಳೆ ಕಾಮಗಾರಿ ನಡೆಸುವ ಗುಂಡಿಯಲ್ಲಿ ಪತ್ತೆಯಾಗಿದೆ. ಪೋಷಕರು ಹಾಗೂ ಗ್ರಾಮಸ್ಥರು ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt *ನಾಲ್ವರು … Continue reading *ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ದುರಂತ: ಇಬ್ಬರು ಬಾಲಕರು ಶವವಾಗಿ ಪತ್ತೆ*