GIT add 2024-1
Beereshwara 33

*ಸುಮಲತಾ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್ ಪರ ದರ್ಶನ ಮತ ಬೇಟೆ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದೆ.‌ ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ ಇಂದು ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.‌

Emergency Service

ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ.

ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ಮಾಡಲಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಕೊನೆಯ ವರೆಗೂ ಶ್ರಮಿಸಿದ್ದ ಸುಮಲತಾ ಕೊನೆಗೂ ಕಣದಿಂದ ಹಿಂದೆ ಸರಿದಿದ್ದರು. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಜತೆ ಭಾಗವಹಿಸಿ ಮತಯಾಚನೆ ಮಾಡಿದ್ದರು. ಆದರೆ, ಇದೀಗ ಸುಮಲತಾರ ಮಾನಸ ಪುತ್ರ ದರ್ಶನ್ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಬೇಟೆಗೆ ಸಜ್ಜಾಗಿದ್ದು, ಸಾಕಷ್ಟು ಕೂತಹಲಕ್ಕೆ ಕಾರಣವಾಗಿದೆ.

Laxmi Tai add
Bottom Add3
Bottom Ad 2