Kannada NewsKarnataka NewsPolitics
*ಹೈಕಮಾಂಡ್ ನಿರ್ಧಾರಕ್ಕೆ ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ, ಯಾವಾಗ ನನ್ನನ್ನು ಕರೆಯುತ್ತಾರೋ ಆಗ ನಾನು ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಅದರಂತೆ ನಡೆದುಕೊಳ್ಳುವೆ ಎಂದಿದ್ದಾರೆ.
ಎಐಸಿಸಿ ಅಧ್ಯಕ್ಷ ಖರ್ಗೆ, ನಾನು ಒಂದೂವರೆ ಗಂಟೆ ಚರ್ಚೆ ಮಾಡಿದ್ದೇವೆ. ಇದೊಂದು ಸೌಹಾರ್ದ ಭೇಟಿ. ನಾನು ಡಲ್ ಆಗಲ್ಲ, ನಾನು ಯಾವಾಗಲೂ ಡಲ್ ಆಗುವ ಪ್ರಶ್ನೆಯೇ ಇಲ್ಲ. ನಾನು ಅತಿಯಾಗಿ ಖುಷಿಯಾಗಿಯೂ ಇರಲ್ಲ ಎಂದರು.




