CrimeKannada NewsKarnataka NewsLatest

*ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ: 9 ಕೈದಿಗಳ ಬಳಿ 10 ಫೋನ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡಿದ ವೇಳೆ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಪತ್ತೆಯಾಗಿರುವ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಮಂಗಳೂರು ಜೈಲಿನ ಮೇಲೆ ಬರ್ಕೆ ಠಾಣೆ ಪೊಲೀಸರ ದಾಳಿ ವೇಳೆ ಜೈಲಿನಲ್ಲಿದ್ದ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಫೋನ್​​ಗಳು ಪತ್ತೆಯಾಗಿವೆ. ಮೊಬೈಲ್ ಬಳಕೆ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಹಿನ್ನೆಲೆಯೇ ಪೊಲೀಸರು ಈ ರೇಡ್​​ ನಡೆಸಿದ್ದರು ಎನ್ನಲಾಗಿದ್ದು, ಎ-ಬ್ಲಾಕ್‌ನಲ್ಲಿದ್ದ ಕೈದಿಗಳ ಬಳಿಯಿದ್ದ 10 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Home add -Advt

ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್, ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್, ಅರ್ಫಜ್ ಎಂಬುವರ ಬಳಿ ಮೊಬೈಲ್​​ಗಳು ಇದ್ದವು ಎನ್ನಲಾಗಿದೆ. ಈ ಪೈಕಿ ನಾಲ್ವರು ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಕೇಸ್​ನ ಆರೋಪಿಗಳು ಎನ್ನಲಾಗಿದ್ದು, ಮೊಬೈಲ್ ಬಳಕೆ ಮತ್ತು ಪೂರೈಕೆ ಸಂಬಂಧ ಬರ್ಕೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.

Related Articles

Back to top button