Kannada NewsLatestNational

*ಪತ್ನಿಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಪತಿ; ಕುಟುಂಬದವರ ದೌರ್ಜನ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್*

ಪ್ರಗತಿವಾಹಿನಿ ಸುದ್ದಿ; ಜೈಪುರ: ಮಹಿಳೆಯೊಬ್ಬಳನ್ನು ಆಕೆಯ ಪತಿಯೇ ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ ಮಾಡಿರುವ ಅಮಾನುಷ ಘಟನೆ ರಾಜಸ್ಥನದ ಪ್ರತಾಪಘಡದಲ್ಲಿ ನಡೆದಿದೆ.

ಮಹಿಳೆಯೊಬ್ಬಳನ್ನು ಥಳಿಸಿ ಆಕೆಯನ್ನು ಬೆತ್ತಲೆಗೊಳಿಸಿ, ಪತಿ ಹಾಗೂ ಆತನ ಮನೆಯವರೇ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಮಹಿಳೆಯನ್ನು ಪತಿಯೇ ವಿವಸ್ತ್ರಗೊಳಿಸುತ್ತಿರುವ ದೃಶ್ಯವನ್ನು ಕುಟುಂಬದವರೇ ಸೆರೆಹಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Home add -Advt

ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ಪಕ್ಕದ ಮನೆಯ ವ್ಯಕ್ತಿಯೊಂದಿಗೆ ಓಡಾಡುತ್ತಿದ್ದಳು ಎಂಬ ಆರೋಪ ಮಡಿರುವ ಆಕೆಯ ಪತಿ ಹಾಗೂ ಮನೆಯವರು ಈ ರೀತಿ ಅಮಾಯವಾಗಿ ವರ್ತಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಜಸ್ಥಾನ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಿಎಂ ಅಶೋಕ್ ಗೆಹ್ಲೋಟ್ ಆರೋಪಿಗಳ ಬಂಧನಕ್ಕೆ ಆದೇಶ ನೀಡಿದ್ದಾರೆ. ಮಹಿಳೆಯ ಪತಿ ಹಾಗೂ ಅತ್ತೆ-ಮಾವ ಈ ಕೃತ್ಯವೆಸಗಿದ್ದು, ಸಮಾಜದಲ್ಲಿ ಇಂತಹ ಅಪರಾಧಗಳಿಗೆ ಸ್ಥಳವಿಲ್ಲ. ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಲಾಗುವುದು. ಇನ್ನು ಸಂತ್ರಸ್ತೆಗೆ ಸರ್ಕಾರಿ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಪತಿ ಹಾಗೂ ಕುಟುಂಬದವರ ಬಂಧನಕ್ಕೆ ಬಲೆ ಬೀಸಿದ್ದಾರೆ.


Related Articles

Back to top button