ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಸದಾ ಮೋದಿ ಸರಕಾರದ ವಿರುದ್ಧ ಧ್ವನಿ ಎತ್ತುತ್ತಲೇ ಬಂದಿರುವ ಪಶ್ಚಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಈ ಬಾರಿ ತಮಗೊಲಿದ ಪದ್ಮಭೂಷಣ ಪ್ರಶಸ್ತಿಯನ್ನೂ ತಿರಸ್ಕರಿಸಿದ್ದಾರೆ. ಇದರಿಂದ ಕೇಂದ್ರ ಸರಕಾರ ಮುಜುಗರ ಅನುಭವಿಸುವಂತಾಗಿದೆ.
ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿರುವ ಪದ್ಮಭೂಷಣ ಪ್ರಶಸ್ತಿಗೆ ಸಿಪಿಎಂ ನಾಯಕರೂ ಆಗಿರುವ ಬುದ್ಧದೇವ ಭಟ್ಟಾಚಾರ್ಯ ಅವರ ಹೆಸರು ಘೋಷಿಸಲಾಗಿತ್ತು. ಆದರೆ ಪ್ರಶಸ್ತಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಬುದ್ಧದೇವ ಭಟ್ಟಾಚಾರ್ಯ ತನಗೆ ಪ್ರಶಸ್ತಿ ನೀಡುತ್ತಿರುವುದು ಗೊತ್ತಿರಲಿಲ್ಲ. ಹಾಗಾಗಿ ಪ್ರಶಸ್ತಿಯನ್ನು ತಿರಸ್ಕರುತ್ತಿದ್ದೇನೆ ಎಂಬ ಹೇಳಿಕೆ ನೀಡಿದ್ದಾರೆ.
ಹೀಗಾಗಲು ಸಾಧ್ಯವೇ ?
ಸಾಮಾನ್ಯಾಗಿ ಪದ್ಮ ಪ್ರಶ್ತಸಿ ಘೋಷಣೆ ಮಾಡುವ ಪೂರ್ವದಲ್ಲಿ ಪ್ರಶಸ್ತಿಗೆ ಭಾಜನರಾಗುವವರ ಬಳಿ ಅನುಮತಿ ಪಡೆಯಲಾಗುತ್ತದೆ. ಆದರೆ ತಾನು ಪ್ರಶಸ್ತಿಗೆ ಆಯ್ಕೆಯಾಗಿರಲಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಭಟ್ಟಾಚಾರ್ಯ ಅಚ್ಚರಿ ಮೂಡಿಸಿದ್ದಾರೆ. ಈ ವಿದ್ಯಮಾನದ ಬಗ್ಗೆ ಕೇಂದ್ರ ಸರಕಾರದ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ ಬುದ್ಧದೇವ ಭಟ್ಟಾಚಾರ್ಯ ಅತಿರಸ್ಕರಿಸಿದ್ದಾರೆ ನೀಡುತ್ತಿರುವ ಬಗ್ಗೆ ಮುಂಚಿತವಾಗಿ ತಿಳಿಸಲಾಗಿತ್ತಂತೆ. ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳು ಭಟ್ಟಾಚಾರ್ಯ ಅವರ ಪತ್ನಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪ್ರಶಸ್ತಿ ನೀಡುತ್ತಿರುವ ಬಗ್ಗೆ ತಿಳಿಸಿದ್ದರು ಎನ್ನಲಾಗಿದೆ.
ಈವರೆಗೆ ಪ್ರಶಸ್ತಿ ತಿರಸ್ಕರಿಸಿದವರು ಇವರು
ದೇಶದ ಅತ್ಯುನ್ನತ ನಾಗರಿಕ ಪ್ರಶ್ತಿಗಳಾದ ಪದ್ಮ ಪ್ರಶಸ್ತಿಯನ್ನು ತಿರಸ್ಕರಿಸುವವರು ತೀರಾ ವಿರಳ. ಆದಾಗ್ಯೂ ಇದುವರೆಗೆ ಕೆಲವೇ ಕೆಲವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ೧೯೭೪ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದಿದ್ದ ಖ್ಯಾತ ಲೇಖಕ ಖುಶ್ವಂತ್ ಸಿಂಗ್ ಸ್ವರ್ಣ ಮಂದಿರದಲ್ಲಿ ಸೇನೆ ಪ್ರವೇಶ ಮಾಡಿದ್ದರ ಪ್ರತಿಭಟನರ್ಥವಾಗಿ ಇಂದಿರಾಗಾAಧಿ ಸರಕಾರಕ್ಕೆ ಪ್ರಶಸ್ತಿ ಹಿಂದಿರುಗಿಸಿದ್ದರು. ಉಳಿದಂತೆ ೨೦೦೫ ರಲ್ಲಿ ಇತಿಹಾಸ ತಜ್ಞೆ ರೋಮಿಲಾ ಥಾಪರ್, ೨೦೧೫ರಲ್ಲಿ ಸಿನಿಮಾ ಬರಹಗಾರ ಸಲೀಮ್ ಪದ್ಮ ಪ್ರಶಸ್ತಿ ತಿರಸ್ಕರಿಸಿದ್ದಾರೆ.
12 ಜಿಲ್ಲೆ, 3000 ಪಂಚಾಯಿತಿಗಳಲ್ಲಿ ಇಂದಿನಿಂದ ಹೊಸ ಯೋಜನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ