Latest

ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ; ಮಾಲಾ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಕದಿರೇಶ್ ಸಹೋದರಿ ಮಾಲಾ ಹಾಗೂ ಆಕೆಯ ಪುತ್ರ ಅರುಳ್ ನನ್ನು ಬೆಂಗಳೂರು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಈ ಮೂಲಕ ಮಹಿಳಾ ಮಾಜಿ ಕಾರ್ಪೊರೇಟರ್ ಹತ್ಯೆ ಹಿಂದೆ ಕುಟುಂಬದವರ ಸಂಚಿರುವುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಲಾ ಹಾಗೂ ಆಕೆಯ ಪುತ್ರ ಅರುಳ್ ಹಾಗೂ ಸೊಸೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ರೇಖಾ ಹತ್ಯೆಯಲ್ಲಿ ಮಾಲಾ ಹಾಗೂ ಅರುಳ್ ಪಾತ್ರದ ಬಗ್ಗೆ ಸಾಕ್ಷಿಗಳು ಲಭ್ಯವಾಗಿದ್ದು, ಇದೀಗ ಇಬ್ಬರನ್ನು ಬಂಧಿಸಲಾಗಿದೆ.

Home add -Advt

ಪ್ರಕರಣ ಸಂಬಂಧ ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಯಾರಿಗೆ ಸಿಗುತ್ತೆ ಕೇಂದ್ರ ಸಂಪುಟದಲ್ಲಿ ಸ್ಥಾನ?

Related Articles

Back to top button