ಪ್ರಗತಿವಾಹಿನಿ ಸುದ್ದಿ; ಮುಂಬೈ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮ್ಮನ್ನು ವಶಕ್ಕೆ ಪಡೆದದ್ದನ್ನು ವಿರೋಧಿಸಿ ದೇಶ್ ಮುಖ್, ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಸಿಬಿಐ ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ದೇಶ ಮುಖ್ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ಬಳಿಕ ಸಿಬಿಐ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಬಂಧಿಸಿದೆ.
ಅನಿಲ್ ದೇಶ್ ಮುಖ್ ವಿರುದ್ಧ 100 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಮಾಜಿ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್, ಸಿಎಂ ಉದ್ಧವ್ ಠಾಕ್ರೆಯವರಿಗೆ ಪತ್ರ ಬರೆದು ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರಲ್ಲದೇ ಕ್ರಮಕ್ಕೆ ಒತ್ತಾಯಿಸಿದ್ದರು. ಅನಿಲ್ ದೇಶ್ ಮುಖ್ ಮುಂಬೈನ 1750 ಬಾರ್ ಹಾಗೂ ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ಹಣ ತಂದುಕೊಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ್ದರು ಎಂದು ಆರೋಪಿಸಿದ್ದರು. ಪ್ರಕರಣದ ಬೆನ್ನಲ್ಲೇ ಅನಿಲ್ ದೇಶ್ ಮುಖ್ ಗೃಹ ಸಚಿವರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಗೃಹ ಸಚಿವರಿಂದ ಪದೇ ಪದೇ ಯಡವಟ್ಟು; ತಪ್ಪೊಪ್ಪಿಕೊಂಡ ಅರಗ ಜ್ಞಾನೇಂದ್ರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ