
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಚಿಕ್ಕಮಗಳೂರಿನ ಹೇಮಗಿರಿ ಬಳಿ ಈ ಅಪಘಾತ ಸಂಭವಿಸಿದೆ.
ಬೀರೂರಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಟೋ ಚಾಲಕನಿಗೆ ಗಾಯಗಳಾಗಿವೆ. ಮಾಜಿ ಸಚಿವ ಮಾಧುಸ್ವಾಮಿಗೆ ಯಾವುದೇ ಗಾಯಗಳಾಗಿಲ್ಲ.
ಗಾಯಾಳು ಆಟೋ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ