*ಮಾಜಿ ಸಚಿವ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಚಿಕ್ಕಮಗಳೂರಿನ ಹೇಮಗಿರಿ ಬಳಿ ಈ ಅಪಘಾತ ಸಂಭವಿಸಿದೆ. ಬೀರೂರಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಟೋ ಚಾಲಕನಿಗೆ ಗಾಯಗಳಾಗಿವೆ. ಮಾಜಿ ಸಚಿವ ಮಾಧುಸ್ವಾಮಿಗೆ ಯಾವುದೇ ಗಾಯಗಳಾಗಿಲ್ಲ. ಗಾಯಾಳು ಆಟೋ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. *ನೀತಿ ಸಂಹಿತೆ ಉಲ್ಲಂಘನೆ: ಸಹಶಿಕ್ಷಕ ಸಸ್ಪೆಂಡ್*