*ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ನಾಲ್ಕು ಸದನಗಳನ್ನು ಪ್ರವೇಶಿಸಿದ್ದ ಅಪರೂಪದ ರಾಜಕಾರಣಿ ಎನಿಸಿಕೊಂಡಿದ್ದ ಗೌಡರು, ಮೂರು ಬಾರಿ ಸಂಸದರಾಗಿ, ಶಾಸಕರಾಗಿ ಜನ ಮನ್ನಣೆ ಗಳಿಸಿದ್ದರು. ಚಂದ್ರೇಗೌಡರ ನಿಧನದಿಂದ ಕರ್ನಾಟಕ ಓರ್ವ ಮುತ್ಸದಿ ರಾಜಕಾರಣಿಯನ್ನು ಕಳೆದುಕೊಂಡಂತೆ ಆಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಜಿ ಪ್ರಧಾನಿ
ಶ್ರೀಮತಿ ಇಂದಿರಾ ಗಾಂಧಿ ಅವರಿಗಾಗಿ ಚಿಕ್ಕ ಮಗಳೂರು ಲೋಕಸಭಾ ಸದಸ್ಯತ್ವ ಸ್ಥಾನವನ್ನು ತ್ಯಾಗ ಮಾಡಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.
ಡಿ.ಬಿ. ಚಂದ್ರೇಗೌಡರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ