*ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ಬಿ.ಚಂದ್ರೇಗೌಡ (87) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.Home add -Advt ಬೆಂಗಳೂರಿನಲ್ಲಿದ್ದ ಚಂದ್ರ‍ೇಗೌಡ ಅವರನ್ನು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದಾರದಹಳ್ಳಿ ನಿವಾಸಕ್ಕೆ ಕರೆತರಲಾಗಿತ್ತು. ಇಂದು ಮುಂಜಾನೆ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರೇಗೌಡ ಅವರು, ಸಕ್ರಿಯ ರಾಜಕಾರಣದಿಂದ ದೂರವಿದ್ದರು. ಮೃತರು ಪತ್ನಿ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕರ್ನಾಟಕದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಚುನಾವಣೆಗೆ ಸ್ಪರ್ಧಿಸಲು ಮುಂದಾದಾಗ ತಮ್ಮ ಚಿಕ್ಕಮಗಳೂರು ಲೋಕಸಭಾ ಸದಸ್ಯ ಸ್ಥಾನವನ್ನೇ … Continue reading *ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ*