Wanted Tailor2
Cancer Hospital 2
Bottom Add. 3

*ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ವಿಧಿವಶ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಕಾಂಗ್ರೆಸ್ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಕಾಂಗ್ರೆಸ್ ಹಿರಿಯ ಮುಖಂಡರೂ ಆಗಿದ್ದ ಸಿ.ವೆಂಕಟೇಶಪ್ಪ ಅವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ವೆಂಕಟೇಶಪ್ಪ ಕೊನೆಯುಸಿರೆಳೆದಿದ್ದಾರೆ. ಪಾರ್ಥಿವಶರೀರವನ್ನು ಸ್ವಗ್ರಾಮಕ್ಕೆ ತರಲಾಗಿದ್ದು, ವೆಂಕಟೇಶಪ್ಪ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವೆಂಕಟೇಶಪ್ಪ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.


Bottom Add3
Bottom Ad 2

You cannot copy content of this page