LatestPolitics

*ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಸೇಡಂ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಡಾ.ನಾಗರೆಡ್ಡಿ ಪಾಟೀಲ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಇಂದು ಬೆಳಗಿನ ಜಾವ 3 ಗಂತೆ ಸುಮಾರಿಗೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ನಾಗರೆಡ್ಡಿ, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಅವರ ತಂದೆ.

ಇಂದು ಮಧ್ಯಾಹ್ನ 3:30ಕ್ಕೆ ಸೇಡಂ ಪಟ್ಟಣದಲ್ಲಿ ನಾಗರೆಡ್ಡಿ ಅವರ ಅಂತ್ಯಕ್ರಿಯೆ ನಡೆಯಲಿದೆ. ನಾಗರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button