Kannada NewsLatest

ಕೋವಿಡ್ ನಿಂದ ಜನರನ್ನು ರಕ್ಷಿಸಲು ಉಚಿತ ಸೇವೆ – ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಿಪ್ಪಾಣಿಯ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಸಿಬಿಎಸ್ ಸಿಯಲ್ಲಿ ನಿರ್ಮಿಸಿರುವ ಜೊಲ್ಲೆ ಉದ್ಯೋಗ ಸಮೂಹದ ಕೋವಿಡ್ ಆಸ್ಪತ್ರೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಭೇಟಿ ನೀಡಿ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಸಭೆ ನಡೆಸಿ, ಕೊರೋನಾ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತಾಗಿ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಕೋವಿಡ್ ಆಸ್ಪತ್ರೆಯಲ್ಲಿ ಯಾವ ರೋಗಿಗಳಿಗೂ ತೊಂದರೆಯಾಗಬಾರದು. ವೈದ್ಯರು ಹಾಗೂ ಸಿಬ್ಬಂದಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರು ಭಯಪಡಬೇಡಿ. ಕೊರೋನಾದಿಂದ ರೋಗಿಗಳನ್ನು ರಕ್ಷಿಸುವುದು ಮುಖ್ಯವಾಗಿದ್ದು, ಚಿಕಿತ್ಸೆಗೆ ನೆರವಾಗುವ ಯಾವುದೇ ಅವಶ್ಯಕ ವಸ್ತುಗಳು ಬೇಕಾದಲ್ಲಿ ಅದನ್ನು ನಾವು ಪೂರೈಸಲು ಸಿದ್ಧರಿದ್ದೇವೆ ಎಂದು ಹೇಳಿದರು.

ಶಿಕ್ಷಣ ಇಲಾಖೆ ಅಧಿಕಾರಿ ಕಾಮಾಕ್ಷಮ್ಮ ಕೊರೋನಾಗೆ ಬಲಿ
ಕೋವಿಡ್ ಕೇರ್ ಸೆಂಟರ್ ದಾಖಲಾಗಲು ವರದಿ ಕಡ್ಡಾಯವಲ್ಲ

Home add -Advt

Related Articles

Back to top button