Politics

*ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ ಮಂಗಳೂರಿನ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮೊಹಿಯುದ್ದೀನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಚಾರವಾಗಿ ನವಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷರ ಕಚೇರಿಗೆ ಇಬ್ಬರು ಸಹಚರರೊಂದಿಗೆ ನುಗ್ಗಿದ್ದ ಮೊಹಿಯುದ್ದೀನ್ ಬಾವ, ಗಲಾಟೆ ನಡೆಸಿದ್ದರು.ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಪ್ರಾಧಿಕಾರದ ಉಪಾಧ್ಯಕ್ಷರನ್ನು ಹೊರಹೋಗಲು ಬಿಡದೇ ಅವರನ್ನು ತಡೆದು ನಿಲ್ಲಿಸಿ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ಅವರು ಬೇರೆ ಕರ್ತವ್ಯಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದಾಗಲೂ ಅವರನ್ನು ತಡೆದು ನಿಲ್ಲಿಸಿ ಮತ್ತೆ ಗಲಾಟೆ ನಡೆಸಿದ್ದಾರೆ. ನವಮಂಗಳೂರು ಬಂದರು ಪ್ರಾಧಿಕಾರದ ಕಾರ್ಯದರ್ಶಿ ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಮೊಹಿಯುದ್ದೀನ್ ಬಾವಾ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ‍್ ದಾಖಲಾಗಿದೆ.

https://pragativahini.com/singer-manglibirth-day-party-police-raid


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button