Politics

*ಮಾಜಿ ಶಾಸಕ ಆರ್.ನಾರಾಯಣ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಆರ್.ನಾರಾಯಣ ಅನಾರೋಗ್ಯದಿಂದ ವಿಧಿವಶರಾಗಿರುವ ಘಟನೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ನಡೆದಿದೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಆರ್.ನಾರಾಯಣ ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಬೆಳ್ಳಾವಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಒಟ್ಟು ಮೂರು ಬಾರಿ ಶಾಸಕರಾಗಿದ್ದರು. ದಿ.ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಹೌಸಿಂಗ್ ಬೋರ್ಡ್ ಚೇರ್ಮನ್ ಆಗಿ ಹಲವು ಗಮನಾರ್ಹ್ ಕೆಲಸ ಮಾಡಿದ್ದರು.

Home add -Advt

ಮಧ್ಯಾಹ್ನ 12 ಗಂಟೆಯಿಂದ ಗಾಂಧಿನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button