Kannada NewsKarnataka NewsLatestPolitics
*ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್; ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಬಿಜೆಪಿ ಮಾಜಿ ಶಾಸಕ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ರಾಣೇಬೆನ್ನೂರಿನ ಮುಖಂಡ ಆರ್. ಶಂಕರ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.