Kannada NewsKarnataka NewsLatestPolitics

*ದುಡ್ಡಿಗಾಗಿ ಬೊಮ್ಮಾಯಿ ಎಂಎಲ್ ಎ ಟಿಕೆಟ್ ನ್ನೇ ಮಾರಿದ್ದಾರೆ; ರಾಮಣ್ಣ ಲಮಾಣಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಕಾವು ಏರುತ್ತಿದ್ದು, ರಾಜಕೀಯ ನಾಯಕರು ಪರಸ್ಪರ ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಶಿರಹಟ್ಟಿ ಮಾಜಿ ಶಾಸಕ ರಾಮಣ್ಣ ಲಮಾಣಿ ಮಾಜಿ ಸಿಎಂ, ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಣ್ಣ ಲಮಾಣಿ, ಬಸವರಾಜ್ ಬೊಮ್ಮಾಯಿ ಶಿರಹಟ್ಟಿ ಬಿಜೆಪಿ ಟಿಕೆಟ್ ನ್ನು ದುಡ್ಡಿಗೆ ಮಾರಾಟ ಮಾಡಿದ್ದಾರೆ. ಹಣಕ್ಕಾಗಿ ಅಂದಿನ ಸಿಎಂ ಬೊಮ್ಮಾಯಿ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಶಿರಹಟ್ಟಿ ಎಂಎಲ್ ಎ ಟಿಕೆಟ್ ನ್ನು ಬಿಜೆಪಿ ಮಾರಾಟ ಮಾಡಿದೆ. ಆಗಿನ ಮುಖ್ಯಮಂತ್ರಿ ಆಗಿದ್ದ ಬಸವರಾಜ್ ಬೊಮ್ಮಾಯಿ ಅವರೇ ಹಣಕ್ಕಾಗಿ ಮಾರಾಟ ಮಾಡಿದ್ದಾರೆ. ನಮ್ಮ ಕ್ಷೇತ್ರದವರಲ್ಲದವರಿಗೆ ಟಿಕೆಟ್ ಮಾರಿದ್ದಾರೆ. ಬಿಜೆಪಿಯಲ್ಲಿ ಶ್ರಮ ಪಟ್ಟು ಪಕ್ಷ ಕಟ್ಟಿದ್ದೆ. ಆದರೆ ಟಿಕೆಟ್ ಕೈತಪ್ಪಿದ ಕಾರಣ ಬೇಸರದಿಂದ ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಬಸವರಾಜ್ ಬೊಮ್ಮಾಯಿ ಅವರಿಂದ ಶಿರಹಟ್ಟಿ ತಾಲೂಕಿಗೆ ಅನ್ಯಾಯವಾಗಿದೆ ಎಂದು ಕಿಡಿಕಾರಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button