
ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಶಿವಶರಣಪ್ಪಗೌಡ ಪಾತೀಲ್ ಅವರನ್ನು ತುಮಕೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಶಿವಶರಣಪ್ಪಗೌಡ ಪಾಟೀಲ್ 1999ರಿಂದ 2004ರವರೆಗೆ ಯಲಬುರ್ಗಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
