Latest

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು (60) ಅವರಿಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿಯೇ ಕುಸಿದು ಬಿದ್ದ ಮಾಜಿ ಶಾಸಕರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುತ್ತಿದ್ದು, ಸಭೆ ಆರಂಭಕ್ಕೂ ಕೆಲ ಸಮಯದ ಮೊದಲು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದೆ.

ಸಭೆಗೆ ಬಂದಿದ್ದ ಮಾಜಿ ಶಾಸಕ ಬಿದರೂರು ಅವರಿಗೆ ಇದ್ದಕ್ಕಿದ್ದಂತೆ ವಾಂತಿಯಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ವರ್ತೂರು ಕೋಡಿ ಬಳಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಶ್ರೀಶೈಲಪ್ಪ ಬಿದರೂರು ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದರು. 2019ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

Related Articles

Back to top button