
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಾಸು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಾಸು ಅವರನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.
ವಾಸು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ಚಾಮರಾಜ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವಿದ್ಯಾವಿಕಾಸ ಇಂಜಿನಿಯರಿಂಗ್ ಕಾಲೇಜು ನಡೆಸುತ್ತಿದ್ದರು. ಮಾಜಿ ಶಾಸಕನ ಅಗಲಿಕೆಗೆ ಕಾಂಗ್ರೆಸ್ ನಾಯಕರು ಕಂಬನಿ ಮಿಡಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ