*ಮಾಜಿ ಶಾಸಕ ವಾಸು ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಾಸು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಾಸು ಅವರನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.Home add -Advt ವಾಸು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ಚಾಮರಾಜ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವಿದ್ಯಾವಿಕಾಸ ಇಂಜಿನಿಯರಿಂಗ್ ಕಾಲೇಜು ನಡೆಸುತ್ತಿದ್ದರು. ಮಾಜಿ ಶಾಸಕನ ಅಗಲಿಕೆಗೆ ಕಾಂಗ್ರೆಸ್ ನಾಯಕರು ಕಂಬನಿ ಮಿಡಿದಿದ್ದಾರೆ. *ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ 10ನೇ ತರಗತಿ ವಿದ್ಯಾರ್ಥಿನಿ*