Kannada NewsLatestNationalPolitics

*ಕಾಂಗ್ರೆಸ್ ಮಾಜಿ ಶಾಸಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನ ಮಾಜಿ ಶಾಸಕ ವಿವೇಕ್ ಧಾಕಡ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಭಿಲ್ವಾರಾದಲ್ಲಿ ನಡೆದಿದೆ.

ಸುಭಾಷ್ ನಗರದಲ್ಲಿರುವ ತಮ್ಮಮನೆಯಲ್ಲಿಯೇ ವಿವೇಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ತಂದೆ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವಿವೇಕ್ ಧಾಕಡ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ವಿವೇಕ್ ಧಾಕಡ್ ಮನೆಯ ತಮ್ಮ ಕೋಣೆಯಲ್ಲಿ ಕೈ ನರ ಕಟ್ ಮಾಡಿಕೊಂಡು ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ಕುಟುಂಬದವರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿವೇಕ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಪೊಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ವಿವೇಕ್ ಧಾಕಡ್ ಮಂಡಲಗಢ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button