ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಹೊರವಲಯದಲ್ಲಿ ನಡೆದಿದೆ.
ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಆಗಮಿಸುತ್ತಿದ್ದಾಗ ಅಥಣಿ ಹೊರವಲಯದಲ್ಲಿ ಕಾರು ಅಪಘಾತ ಸಂಭವಿಸಿದೆ. ವಿಜಯಪುರದತ್ತ ಸಾಗುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿ ಜೆಡಿಎಸ್ ಮುಖಂಡನ ಕಾರಿನ ಮೇಲೆ ಟೈರ್ ಬಿದ್ದಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮಗೆಣ್ಣವರ್ ಸೇರಿದಂತೆ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಥಣಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
*ಕರೆಂಟ್ ಶಾಕ್ ಗೆ ಜ್ಞಾಪಕ ಶಕ್ತಿಯನ್ನೇ ಕಳೆದುಕೊಂಡ ಬಾಲಕ*
https://pragati.taskdun.com/electrick-wirecurrent-shockboy-injuerdkoppala/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ