
ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ವಿ.ಎಸ್.ಪಾಟೀಲ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಮಾಜಿ ಶಾಸಕರು ಹಾಗೂ ಕಾರು ಚಾಲಕ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಾರವಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರಿನಲ್ಲಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಮಾಜಿ ಶಾಸಕ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ವಿ.ಎಸ್.ಪಾಟೀಲ್ ಅವರ ಎದೆಗೆ ಪೆಟ್ಟಾಗಿದೆ. ಕಾರು ಚಾಲಕ ಆನದ್ ಕಣ್ಣಿಗೆ ಗಾಯಗಳಾಗಿವೆ. ಇಬ್ಬರನ್ನೂ ಮುಂಡಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ