
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಮಾಜಿ ಎಂಎಲ್ ಸಿ ಪಟೇಲ್ ಶಿವರಾಮ್ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟೇಲ್ ಶಿವರಾಮ್, ಹಾಸನ ನಗರದ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ನಾಲ್ಕು ದಶಕಗಳ ಕಾಲ ಜೆಡಿಎಸ್ ನಲ್ಲಿ ಸಕ್ರಿಯ ರಾಜಕರಣಿಯಾಗಿ ಗುರುತಿಸಿಕೊಂಡಿದ್ದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆಪ್ತರೂ ಆಗಿದ್ದರು. ವಿಧಾನ ಪರಿಷತ್ ಸದಸ್ಯ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಹೆಚ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
ಪಟೇಲ್ ಶಿವರಾಮ್ ನಿಧನಕ್ಕೆ ಜೆಡಿಎಸ್ ನಾಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ