ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಜೆಡಿಎಸ್ ಮಹಿಳಾ ಕಾರ್ಯಕರ್ತೆ ಜತೆ ಮಾತನಾಡಿದ್ದಾರೆ ಎನ್ನಲಾದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲೋಕಸಭಾ ಉಪಚುನಾವಣೆಯಲ್ಲಿ 30 ಕೋಟಿ ಖರ್ಚು ಮಾಡಿದ ಬಗ್ಗೆ ಹಾಗೂ ಮುಂದಿನ ಚುನಾವಣೆಗೆ ಖರ್ಚು ಮಾಡುತ್ತಿರುವ ಹಣದ ಬಗ್ಗೆ ಮಾಜಿ ಸಂಸದ ಮಾದೇಗೌಡರನ್ನು ಥಳಿಸಿದ ಬಗ್ಗೆಯೂ ಮಾತನಾಡಿದ್ದಾರೆ. ಅಲ್ಲದೇ ಚುನಾವಣೆಗೆ ತಾವು ಸ್ಪರ್ಧಿಸುತ್ತಿದ್ದು, ತನಗೆ ಬೆಂಬಲ ನೀಡುವಂತೆ ಕೇಳಿದ್ದಾರೆ.
ಅರ್ಧಗಂಟೆಗೂ ಹೆಚ್ಚು ಸಮಯವಿರುವ ಆಡಿಯೋದಲ್ಲಿ ಲೋಕಸಭಾ ಉಪಚುನಾವಣೆಗೆ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ. ಎಂ ಎಲ್ ಸಿ ಚುನಾವಣೆಗೆ 27 ಕೋಟಿ ಖರ್ಚು ಮಾಡಿದ್ದೆ. 5 ತಿಂಗಳಿಗೆ ಎಂಪಿ ಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೇನೆ. ಮುಂದಿನ ನಾಗಮಂಗಲ ಚುನಾವಣೆಗೂ 30 ಕೋಟಿ ಖರ್ಚು ಮಾಡುತ್ತೇನೆ ಎಂದು ಹೇಳಿದ್ದಾರೆ.
ನಾಗಮಂಗಲದಲ್ಲಿ ನಡೆಯುವ ಸಭೆಗೆ ಆಹ್ವಾನಿಸಲು ಮಹಿಳಾ ಕಾರ್ಯಕರ್ತೆಗೆ ಕರೆ ಮಾಡಿದ್ದರು ಎನ್ನಲಾಗಿದೆ. ಈ ವೇಳೆ ನನ್ನದು 8 ಸ್ಕೂಲ್ ಇದೆ. ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ. ಮುಂದಿನ ನಾಗಮಂಗಲ ವಿಧಾನಸಭಾ ಚುನಾವಣೆಗೆ 10 ತಿಂಗಳ ಸಂಬಳದಷ್ಟೇ ಹಣಬೇಕು. ಅಷ್ಟು ಹಣ ಖರ್ಚು ಮಾಡುತ್ತಿದ್ದೇನೆ. ನನಗೆ ಬೆಂಬಲ ನೀಡಬೇಕು ಎಂದಿದ್ದಾರೆ.
ಸುರೇಶ್ ಗೌಡ ನನಗೆ ಲೋಕಸಭೆ ಟಿಕೆಟ್ ತಪ್ಪಿಸಿದ್ದ. ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಿಸಿ, ಅವರ ಮನೆಗೂ ಕಂಟಕ, ನನಗೂ ಕಂಟಕ ತಂದರು. ಮುಂದಿನ ಬಾರಿ ಚುನಾವಣೆಗೆ ನಾನು ನಿಲ್ಲುತ್ತೇನೆ. ಇನ್ನು ಮಾಜಿ ಸಂಸದ ಜಿ.ಮಾದೇಗೌಡರ ಬಗ್ಗೆಯೂ ಮಾತನಾಡಿರುವ ಶಿವರಾಮೇಗೌಡ, 5 ಬಾರಿ ಕಾಂಗ್ರೆಸ್ ನಿಂದ ಸೋತಿದ್ದೇನೆ. ಜಿ.ಮಾದೇಗೌಡರಿಗೆ ಎಕ್ಕಡದಲ್ಲಿ ಹೊಡೆದಿದ್ದೆ. ಮಾದೇಗೌಡರ ವಿರೋಧದಿಂದ ಸೋತೆ ಎಂದು ಹೇಳಿದ್ದಾರೆ.
ಕೋವಿಡ್ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ; ಪಾಸಿಟಿವಿಟಿ ರೇಟ್ ನಲ್ಲೂ ಏರಿಕೆ: 893 ಜನರ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ