Latest

ಜೆಡಿಎಸ್ ನಿಂದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಉಚ್ಛಾಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿದ್ದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿನ್ನೆಯಷ್ಟೇ ಎಲ್.ಆರ್.ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಡಿ.ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರಲ್ಲದೇ ಲೋಕಸಭಾ ಉಪಚುನಾವಣೆಯಲ್ಲಿ 30 ಕೋಟಿ ಹಣ ಖರ್ಚು ಮಾಡಿದ್ದಾಗಿಯೂ ಹೇಳಿದ್ದರು.

ಆಡಿಯೋ ವೈರಲ್ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರಲ್ಲದೇ ಪಕ್ಷದಿಂದ ಶಿವರಾಮೇಗೌಡರನ್ನು ಹೊರಹಾಕುವಂತೆ ರಾಜ್ಯಾಧ್ಯಕ್ಷರಿಗೆ ಸೂಚಿಸಿದ್ದರು.
ಮೂವರು IAS ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button