Latest

*ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರ ಪತ್ನಿ ಅನಾರೋಗ್ಯದಿಂದ ವಿಧಿವಶರಾಗಿರುವ ಘಟನೆ ನಡೆದಿದೆ.

ಹಲವು ದಿನಗಳಿಂದ ಅನಾರೋಗ್ಯದಿಂದ  ಬಳಲುತ್ತಿದ್ದ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ವಿಜಯಮ್ಮ 2 ತಿಂಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ವಿಜಯಮ್ಮ ಕೊನೆಯುಸಿರೆಳೆದಿದ್ದಾರೆ.

 

Home add -Advt

*ಡಿ.ಕೆ. ಶಿವಕುಮಾರ್ ಸಂತಾಪ*

*

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಧರ್ಮಪತ್ನಿ ವಿಜಯಮ್ಮ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

‘ರಮೇಶ್ ಕುಮಾರ್ ಅವರಿಗೆ ಪತ್ನಿ ವಿಯೋಗದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ವಿಜಯಮ್ಮ ಅವರು ರಮೇಶ್ ಕುಮಾರ್ ಅವರ ಬದುಕಿನ ಪ್ರತಿ ಹಂತದಲ್ಲೂ ಜೊತೆಯಾಗಿ ನಿಂತವರು.

ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ರಮೇಶ್ ಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯ ಬಜೆಟ್ 2023-24: ಸಮಗ್ರ ಮಾಹಿತಿ

https://pragati.taskdun.com/karnataka-budget-2023-24cm-basavaraj-bommaividhanasoudha/

Related Articles

Back to top button